ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಅಭಿಷೇಕ
ಮಂಗಳೂರು: ನಾಗರಪಂಚಮಿ ಪ್ರಯುಕ್ತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಅಭಿಷೇಕ ಹಾಗೂ ಪೂಜಾ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ನೆರವೇರಿದವು.
By Billavavani

ಮಂಗಳೂರು: ನಾಗರಪಂಚಮಿ ಪ್ರಯುಕ್ತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಅಭಿಷೇಕ ಹಾಗೂ ಪೂಜಾ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ನೆರವೇರಿದವು.
ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಡಾ. ಬಿ.ಜಿ. ಸುವರ್ಣ, ಸದಸ್ಯರಾದ ಪಿ.ಕೆ. ಗೌರವಿ ರಾಜಶೇಖರ್ ಹಾಗೂ ಶ್ರೀ ಗೋಕರ್ಣನಾಥ ಬ್ಯಾಂಕ್ ಅಧ್ಯಕ್ಷ ಚಂದ್ರಶೇಖರ್ ಸೇರಿದಂತೆ ಕ್ಷೇತ್ರದ ಪದಾಧಿಕಾರಿಗಳು, ಸದಸ್ಯರು ಮತ್ತು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ನಾಗರಪಂಚಮಿ ಅಂಗವಾಗಿ ನಡೆದ ವಿಶೇಷ ಪೂಜೆ ಹಾಗೂ ಅಭಿಷೇಕದಲ್ಲಿ ಸಹಸ್ರಾರು ಭಕ್ತರು ಭಾಗವಹಿಸಿ ದೇವರ ದರ್ಶನ ಪಡೆದು, ಬಳಿಕ ಅನ್ನಪ್ರಸಾದ ಸ್ವೀಕರಿಸಿದರು.