ಶಿಕ್ಷಕರನ್ನು ಗೌರವಿಸಿ ಅಭಿನಂದಿಸಿದ ಯುವವಾಹಿನಿ ಬಜಪೆ ಘಟಕ
ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಸೆಪ್ಟೆಂಬರ್ 12ರಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ, ಬಜಪೆಯಲ್ಲಿ ಗೌರವಪೂರ್ವಕವಾಗಿ ಆಚರಿಸಲಾಯಿತು.

ಬಜಪೆ, ಸೆ. 12: ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಸೆಪ್ಟೆಂಬರ್ 12ರಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ, ಬಜಪೆಯಲ್ಲಿ ಗೌರವಪೂರ್ವಕವಾಗಿ ಆಚರಿಸಲಾಯಿತು.
ಬೋಧನಾ ವೃತ್ತಿ ಅತ್ಯಂತ ಶ್ರೇಷ್ಠ ವೃತ್ತಿಗಳಲ್ಲಿ ಒಂದೆಂದು ಪರಿಗಣಿಸುವ ನಮ್ಮ ದೇಶದಲ್ಲಿ, ವಿದ್ಯಾರ್ಥಿಗಳ ಬದುಕಿನಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಅಜ್ಞಾನದ ಕತ್ತಲೆಯನ್ನು ದೂರಗೊಳಿಸಿ ಜ್ಞಾನದ ದೀಪ ಬೆಳಗಿಸುವುದರ ಜೊತೆಗೆ, ಮಕ್ಕಳಿಗೆ ಅಕ್ಷರ ಜ್ಞಾನವನ್ನು ನೀಡುವುದು, ಅವರ ಸರಿ-ತಪ್ಪುಗಳನ್ನು ತಿದ್ದುವುದು, ಪ್ರತಿಭೆ ಹಾಗೂ ಆಸಕ್ತಿಗಳನ್ನು ಗುರುತಿಸಿ ಬೆಳೆಸುವುದು ಮತ್ತು ಬದುಕಿಗೆ ಸೂಕ್ತ ಗುರಿಯನ್ನು ರೂಪಿಸಿಕೊಳ್ಳಲು ಮಾರ್ಗದರ್ಶನ ನೀಡುವುದು ಶಿಕ್ಷಕರ ಪ್ರಮುಖ ಜವಾಬ್ದಾರಿಯಾಗಿದೆ.
ಈ ಸಂದರ್ಭದಲ್ಲಿ ಮಹಾನ್ ಶಿಕ್ಷಣ ತಜ್ಞ ಹಾಗೂ ಭಾರತದ ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳನ್ನು ಸ್ಮರಿಸಲಾಯಿತು.
ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ ಯುವವಾಹಿನಿ ಬಜಪೆ ಘಟಕದ ಸದಸ್ಯರಾಗಿರುವ ಯೋಗೀಶ್ ಪೂಜಾರಿ, ಶ್ರೀಮತಿ ಸಂಧ್ಯಾ ಕುಲಾಯಿ, ಶ್ರೀಮತಿ ಪೂಜಾ ಕಿರಣ್, ಡಾ. ಶಿಲ್ಪಾ ದಿನೇಶ್ ಹಾಗೂ ಶ್ರೀಮತಿ ರೂಪ ಸತೀಶ್ ಅವರನ್ನು ಘಟಕದ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಕರ ಸೇವೆ, ಸಮರ್ಪಣೆ ಮತ್ತು ಸಮಾಜ ನಿರ್ಮಾಣದಲ್ಲಿ ಅವರ ಕೊಡುಗೆಯನ್ನು ಸ್ಮರಿಸಿ, ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಲಾಯಿತು. ಯುವವಾಹಿನಿ ಬಜಪೆ ಘಟಕದ ಈ ಕಾರ್ಯಕ್ರಮವು ಶಿಕ್ಷಕರ ವೃತ್ತಿಯ ಮಹತ್ವವನ್ನು ಸಾರುವುದರೊಂದಿಗೆ, ಸಮಾಜದಲ್ಲಿ ಶಿಕ್ಷಕರಿಗೆ ಸಲ್ಲಬೇಕಾದ ಗೌರವವನ್ನು ಎತ್ತಿಹಿಡಿಯುವಂತಾಯಿತು.
