Skip to content
Billava News

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಸಮಗ್ರ ತನಿಖೆ ನಡೆಸಿ ನಿಷ್ಪಕ್ಷಪಾತ ನ್ಯಾಯ ಒದಗಿಸುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಆಗ್ರಹ

ಉಡುಪಿ: ಪೆರ್ಡೂರು ನಿವಾಸಿ ಪ್ರದೀಪ್ ಪೂಜಾರಿ ಅವರ ಆತ್ಮಹತ್ಯೆ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಿ, ಸಂತ್ರಸ್ತ ಕುಟುಂಬಕ್ಕೆ ನಿಷ್ಪಕ್ಷಪಾತ ನ್ಯಾಯ ಒದಗಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯು ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ ಸಲ್ಲಿಸಿದೆ.

By Billavavani

ಪ್ರದೀಪ್ ಪೂಜಾರಿ ಅವರ ಸಾವಿಗೆ ಕಾರಣರಾದ ನಿಜವಾದ ಆರೋಪಿಗಳನ್ನು ಹಾಗೂ ಪ್ರಕರಣದಲ್ಲಿ ಪರೋಕ್ಷವಾಗಿ ಸಹಕರಿಸಿದವರನ್ನು ಗುರುತಿಸಿ ತಕ್ಷಣ ಬಂಧಿಸಬೇಕು. ಪ್ರಕರಣದ ಪ್ರತಿಯೊಂದು ಆಯಾಮವನ್ನೂ ಸಮಗ್ರವಾಗಿ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಾನೂನುಬದ್ಧ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರೆಯುವವರೆಗೆ ಹಾಗೂ ಪ್ರಕರಣದ ಸಂಪೂರ್ಣ ತನಿಖೆ ಪೂರ್ಣಗೊಳ್ಳುವವರೆಗೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯು ಮೃತ ಪ್ರದೀಪ್ ಪೂಜಾರಿ ಅವರ ಕುಟುಂಬದೊಂದಿಗೆ ಸದಾ ನಿಲ್ಲಲಿದೆ ಎಂದು ವೇದಿಕೆಯ ಅಧ್ಯಕ್ಷ ಪ್ರವೀಣ್ ಎಂ. ಪೂಜಾರಿ ತಿಳಿಸಿದ್ದಾರೆ.