ಶ್ರೀ ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರ ದರ್ಶನ ಪಡೆದ ವಿಶ್ವ ಹಿಂದೂ ಪರಿಷತ್‌ನ ಅಂತರರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಅಲೋಕ್ ಕುಮಾರ್
ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಪೂಜ್ಯ ಶ್ರೀ ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರ ದರ್ಶನ ಪಡೆದ ವಿಶ್ವ ಹಿಂದೂ ಪರಿಷತ್‌ನ ಅಂತರರಾಷ್ಟ್ರೀಯ ಅಧ್ಯಕ್ಷರಾದ ...

ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಪೂಜ್ಯ ಶ್ರೀ ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರ ದರ್ಶನ ಪಡೆದ ವಿಶ್ವ ಹಿಂದೂ ಪರಿಷತ್‌ನ ಅಂತರರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಅಲೋಕ್ ಕುಮಾರ್ ಅವರು, ಪೂಜ್ಯ ಶ್ರೀಗಳ ಆಶೀರ್ವಾದ ಪಡೆದುಕೊಂಡರು.
ಗೋಳಿಹೊಳೆ ಶ್ರೀ ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯ ವ್ರತಾಚರಣೆ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಶ್ರೀ ಅಲೋಕ್ ಕುಮಾರ್ ಅವರು ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ಪೂಜ್ಯ ಶ್ರೀ ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರೊಂದಿಗೆ ಧಾರ್ಮಿಕ ಹಾಗೂ ಸಾಮಾಜಿಕ ವಿಚಾರಗಳ ಕುರಿತು ಆತ್ಮೀಯವಾಗಿ ಚರ್ಚಿಸಿದರು.

ಈ ಸಂದರ್ಭದಲ್ಲಿ ವಿಹಿಂಪ ಪ್ರಾಂತ ಸಹ ಕಾರ್ಯದರ್ಶಿ ಶ್ರೀ ಶರಣ್ ಪಂಪ್‌ವೆಲ್, ಚಾತುರ್ಮಾಸ್ಯ ಸಮಿತಿಯ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
