ನಾರಾಯಣ ಗುರು ಜಯಂತಿಯನ್ನು ಸರ್ಕಾರಿ ರಜೆಯಾಗಿ ಘೋಷಿಸುವಂತೆ ಯೂತ್ ಬಿಲ್ಲವ ಕಾರ್ಕಳ ಮನವಿ
ಕಾರ್ಕಳ: ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಕರ್ನಾಟಕ ಸರ್ಕಾರದ ಅಧಿಕೃತ ಸರ್ಕಾರಿ ರಜೆಯಾಗಿ ಘೋಷಿಸಬೇಕೆಂದು ಆಗ್ರಹಿಸಿ...

ಕಾರ್ಕಳ: ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಕರ್ನಾಟಕ ಸರ್ಕಾರದ ಅಧಿಕೃತ ಸರ್ಕಾರಿ ರಜೆಯಾಗಿ ಘೋಷಿಸಬೇಕೆಂದು ಆಗ್ರಹಿಸಿ, ಯೂತ್ ಬಿಲ್ಲವ (ರಿ) ಕಾರ್ಕಳ ಸಂಘಟನೆಯ ವತಿಯಿಂದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷರಾದ ಶ್ರೀ ಮಂಜುನಾಥ್ ಪೂಜಾರಿ ಮುದ್ರಾಡಿ ಅವರಿಗೆ ಮನವಿ ಸಲ್ಲಿಸಲಾಯಿತು.
ಯೂತ್ ಬಿಲ್ಲವ (ರಿ) ಕಾರ್ಕಳದ ಪದಗ್ರಹಣ ಸಮಾರಂಭದ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳು ಈ ಮನವಿಯನ್ನು ಸಲ್ಲಿಸಿ, ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಜಮುಖಿ ತತ್ವಗಳು ಹಾಗೂ ಅವರ ಅಪಾರ ಕೊಡುಗೆಯನ್ನು ಪರಿಗಣಿಸಿ, ಅವರ ಜಯಂತಿಯನ್ನು ಕರ್ನಾಟಕ ಸರ್ಕಾರ ಅಧಿಕೃತ ಸರ್ಕಾರಿ ರಜೆಯಾಗಿ ಘೋಷಿಸುವಂತೆ ಸರ್ಕಾರದ ಗಮನಕ್ಕೆ ತರುವಂತೆ ವಿನಂತಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು, ಸಮಾಜದ ಬಹುಕಾಲದ ಬೇಡಿಕೆಯನ್ನು ಸರ್ಕಾರ ಶೀಘ್ರದಲ್ಲೇ ಈಡೇರಿಸಬೇಕೆಂದು ಆಶಯ ವ್ಯಕ್ತಪಡಿಸಿದರು.
