Skip to content
Billava News

ಯುವವಾಹಿನಿ (ರಿ) ಕೊಲ್ಯ ಘಟಕ : ಅಭಯ ಆಶ್ರಮದಲ್ಲಿ ಹಿರಿಯರೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಯುವವಾಹಿನಿ (ರಿ) ಕೊಲ್ಯ ಘಟಕ, ರೋಟರಿ ಕ್ಲಬ್ ಮಂಗಳೂರು ಪೂರ್ವ ಹಾಗೂ ರೋಟರಿ ಸಮುದಾಯ ದಳ ಕೊಲ್ಯ ಸೋಮೇಶ್ವರ ಇವರ ಜಂಟಿ ಆಶ್ರಯದಲ್ಲಿ ಕೊಣಾಜೆಯಲ್ಲಿರುವ ಅಭಯ ಆಶ್ರಮ ವೃದ್ಧಾಶ್ರಮದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

By Billavavani
ಯುವವಾಹಿನಿ (ರಿ) ಕೊಲ್ಯ ಘಟಕ : ಅಭಯ ಆಶ್ರಮದಲ್ಲಿ ಹಿರಿಯರೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಕೊಲ್ಯ, ಆಗಸ್ಟ್ 15: ಯುವವಾಹಿನಿ (ರಿ) ಕೊಲ್ಯ ಘಟಕ, ರೋಟರಿ ಕ್ಲಬ್ ಮಂಗಳೂರು ಪೂರ್ವ ಹಾಗೂ ರೋಟರಿ ಸಮುದಾಯ ದಳ ಕೊಲ್ಯ ಸೋಮೇಶ್ವರ ಇವರ ಜಂಟಿ ಆಶ್ರಯದಲ್ಲಿ ಕೊಣಾಜೆಯಲ್ಲಿರುವ ಅಭಯ ಆಶ್ರಮ ವೃದ್ಧಾಶ್ರಮದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಸ್ವಾತಂತ್ರ್ಯ ದಿನದ ವಿಶೇಷತೆಯನ್ನು ಹಿರಿಯರೊಂದಿಗೆ ಹಂಚಿಕೊಳ್ಳುವ ಉದ್ದೇಶದಿಂದ ಮೂರು ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಕುಟುಂಬದವರು ಆಶ್ರಮಕ್ಕೆ ಭೇಟಿ ನೀಡಿ ಹಿರಿಯರೊಂದಿಗೆ ಬೆರೆತು ಸಂತಸದ ಕ್ಷಣಗಳನ್ನು ಕಳೆದರು. ಕಾರ್ಯಕ್ರಮದ ಅಂಗವಾಗಿ ಧ್ಯಾನ, ಆರೋಗ್ಯ ಸುಧಾರಣೆಗೆ ಸಹಾಯಕವಾಗುವ ಪ್ರಾಣಾಯಾಮ ಹಾಗೂ ವಿವಿಧ ಮನರಂಜನಾ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ಆಶ್ರಮದ ಕೆಲ ಹಿರಿಯರು ಹಾಡುಗಳನ್ನು ಹಾಡಿ ಎಲ್ಲರನ್ನು ರಂಜಿಸಿದರು.

1001130010.jpg

ಯುವವಾಹಿನಿ ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಆಶ್ರಮದ ಹಿರಿಯರೊಂದಿಗೆ ಕುಶಲೋಪರಿ ವಿಚಾರಿಸಿ, ಅವರೊಂದಿಗೆ ಆತ್ಮೀಯವಾಗಿ ಸಮಯ ಕಳೆದರು. ಕಾರ್ಯಕ್ರಮದ ಸ್ಮರಣಾರ್ಥವಾಗಿ ರೋಟರಿ ಕ್ಲಬ್ ಮಂಗಳೂರು ಪೂರ್ವದ ಅಧ್ಯಕ್ಷೆ ಪಂಚಮಿ, ರೋಟರಿ ಸಮುದಾಯ ದಳ ಕೊಲ್ಯ ಸೋಮೇಶ್ವರದ ಅಧ್ಯಕ್ಷ ಸೀತಾರಾಮ ಕರ್ಕೇರ ಹಾಗೂ ಯುವವಾಹಿನಿ (ರಿ) ಕೊಲ್ಯ ಘಟಕದ ಅಧ್ಯಕ್ಷ ಜೀವನ್ ಕೊಲ್ಯ ಅವರು ಆಶ್ರಮದ ನಿರ್ದೇಶಕರಿಗೆ ಗಿಡವನ್ನು ಹಸ್ತಾಂತರಿಸಿದರು. ಬಳಿಕ ಎಲ್ಲರೂ ಸೇರಿ ಸಹಭೋಜನದಲ್ಲಿ ಪಾಲ್ಗೊಂಡರು.

1001130012.jpg

ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕೊಲ್ಯ ಘಟಕದ ಅಧ್ಯಕ್ಷ ಜೀವನ್ ಕೊಲ್ಯ, ಕಾರ್ಯದರ್ಶಿ ಮುಕೇಶ್ ಕಿನ್ಯ, ಪ್ರಥಮ ಉಪಾಧ್ಯಕ್ಷ ಜೀವನ್ ಬೆರಿಕೆ, ಕೇಂದ್ರ ಸಮಿತಿ ಮಹಿಳಾ ಸಂಘಟನಾ ನಿರ್ದೇಶಕಿ ಸುಧಾ ಸುರೇಶ್, ಕೇಂದ್ರ ಸಮಿತಿ ಲೆಕ್ಕ ಪರಿಶೋಧಕ ನಿರ್ದೇಶಕ ಸುಂದರ್ ಸುವರ್ಣ, ಕೇಂದ್ರ ಸಮಿತಿ ನಾಮ ನಿರ್ದೇಶಕ ಸದಸ್ಯ ಶಶಿಕಾಂತ್ ಪರ್ಯತ್ತೂರು, ಘಟಕದ ಸ್ಥಾಪಕ ಅಧ್ಯಕ್ಷ ಸುರೇಶ್ ಬಿಲ್ಲವ ಸೇರಿದಂತೆ ಘಟಕದ ಪದಾಧಿಕಾರಿಗಳು, ಸದಸ್ಯರು ಹಾಗೂ ಕುಟುಂಬದವರು ಭಾಗವಹಿಸಿದ್ದರು.

1001130013.jpg

ಕೊಲ್ಯ ಘಟಕದ ಮಾಜಿ ಅಧ್ಯಕ್ಷ ಹಾಗೂ ಕೇಂದ್ರ ಸಮಿತಿಯ ಮಾಜಿ ಕಾರ್ಯದರ್ಶಿ ಕುಸುಮಾಕರ್ ಕುಂಪಲ ಕಾರ್ಯಕ್ರಮ ನಿರೂಪಿಸಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ರೋಟರಿ ಕ್ಲಬ್ ಮಂಗಳೂರು ಪೂರ್ವದ ಅಧ್ಯಕ್ಷೆ ಪಂಚಮಿ, ಕಾರ್ಯದರ್ಶಿ ಪ್ರಮೋದ್, ರೋಟರಿ ಸಮುದಾಯ ದಳ ಕೊಲ್ಯ ಸೋಮೇಶ್ವರದ ಅಧ್ಯಕ್ಷ ಸೀತಾರಾಮ ಕರ್ಕೇರ, ಕಾರ್ಯದರ್ಶಿ ಜಯದೇವ್, ಜಿಲ್ಲಾ ಪ್ರತಿನಿಧಿ ಆನಂದ್ ಮಲಯಾಳಕೋಡಿ ಹಾಗೂ ರೋಟರಿ ಸಮುದಾಯ ದಳದ ಸದಸ್ಯರು ಉಪಸ್ಥಿತರಿದ್ದರು.