ಯುವವಾಹಿನಿ ಬಜಪೆ ಘಟಕಕ್ಕೆ ಯುವ ಸಿನಿದನಿ ಕಿರುಚಿತ್ರ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ
ಬಜಪೆ: ಯುವವಾಹಿನಿ (ರಿ.) ಬಜಪೆ ಘಟಕವು ಯುವ ಸಿನಿದನಿ ಕಿರುಚಿತ್ರ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದು ಘಟಕಕ್ಕೆ ಹೆಮ್ಮೆ ತಂದಿದೆ.

ಬಜಪೆ: ಯುವವಾಹಿನಿ (ರಿ.) ಬಜಪೆ ಘಟಕವು ಯುವ ಸಿನಿದನಿ ಕಿರುಚಿತ್ರ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದು ಘಟಕಕ್ಕೆ ಹೆಮ್ಮೆ ತಂದಿದೆ.
ನವೆಂಬರ್ 01ರಂದು ಉಡುಪಿಯ ಯಕ್ಷಗಾನ ಕಲಾರಂಗದಲ್ಲಿ ನಡೆದ ಯುವ ಸಿನಿದನಿ ಕಿರುಚಿತ್ರ ಸ್ಪರ್ಧೆಯಲ್ಲಿ ಬಜಪೆ ಘಟಕವು ಪ್ರಥಮ ರನ್ನರ್ ಅಪ್ ಪ್ರಶಸ್ತಿಯೊಂದಿಗೆ ರೂ. 10,000 ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿದೆ. ಅಲ್ಲದೆ, ಕಿರುಚಿತ್ರದ ಛಾಯಾಗ್ರಹಣಕ್ಕಾಗಿ ಭವಿತ್ ರಾಜ್ ಕೋಟ್ಯಾನ್ ಪೋರ್ಕೊಡಿ ಅವರು ಉತ್ತಮ ಛಾಯಾಗ್ರಾಹಕ ಪ್ರಶಸ್ತಿಗೂ ಭಾಜನರಾಗಿದ್ದಾರೆ.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ, ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಹಾಗೂ ವಿಶುಕುಮಾರ್ ದತ್ತಿನಿಧಿ ಸಮಿತಿಯ ಸಹಯೋಗದೊಂದಿಗೆ ಆಯೋಜಿಸಲಾದ "ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ – 2026" ಕಾರ್ಯಕ್ರಮದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.
ಇದರ ಭಾಗವಾಗಿ ನಡೆದ ಯುವ ಸಿನಿದನಿ ಕಿರುಚಿತ್ರ ಸ್ಪರ್ಧೆಯಲ್ಲಿ ಯುವವಾಹಿನಿ ಬಜಪೆ ಘಟಕವು "ಬದಲಾವಣೆ – ಜಗದ ನಿಯಮ" ಎಂಬ ಶೀರ್ಷಿಕೆಯ ಕಿರುಚಿತ್ರವನ್ನು ಸ್ಪರ್ಧೆಗೆ ಪ್ರಸ್ತುತಪಡಿಸಿತ್ತು. ನಿತೇಶ್ ಪೂಜಾರಿ ಅವರ ನಿರ್ದೇಶನದಲ್ಲಿ, ಭವಿತ್ ರಾಜ್ ಕೋಟ್ಯಾನ್ ಪೋರ್ಕೊಡಿ ಅವರ ಸಂಕಲನ ಹಾಗೂ ಛಾಯಾಗ್ರಹಣದಲ್ಲಿ ಕಿರುಚಿತ್ರವು ಉತ್ತಮವಾಗಿ ಮೂಡಿಬಂದಿದೆ.

ಕಲೆಯ ಮೂಲಕ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುವ ಉದ್ದೇಶದಿಂದ ಆಯೋಜಿಸಲಾದ ಈ ಸ್ಪರ್ಧೆಯು ಯುವ ಪ್ರತಿಭೆಗಳ ಸೃಜನಶೀಲತೆ, ಕಲಾತ್ಮಕ ಅಭಿವ್ಯಕ್ತಿ ಹಾಗೂ ಪ್ರತಿಭಾ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದೆ.
ಈ ಸಾಧನೆಯ ಮೂಲಕ ಯುವವಾಹಿನಿ ಬಜಪೆ ಘಟಕವು ಸಂಘಟನೆಯ ಕೀರ್ತಿಯನ್ನು ಹೆಚ್ಚಿಸಿದ್ದು, ಪ್ರಶಸ್ತಿ ವಿಜೇತ ತಂಡದ ಸದಸ್ಯರಿಗೆ ಘಟಕದ ಪದಾಧಿಕಾರಿಗಳು, ಸದಸ್ಯರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.
