ಯುವವಾಹಿನಿ ಕೊಲ್ಯ ಘಟಕದಲ್ಲಿ ಸಂಭ್ರಮದ ದೀಪಾವಳಿ ಆಚರಣೆ
ಯುವವಾಹಿನಿ (ರಿ.) ಕೊಲ್ಯ ಘಟಕದ ವತಿಯಿಂದ ಸದಸ್ಯರಿಗಾಗಿ ಆಯೋಜಿಸಲಾಗಿದ್ದ ‘ದೀಪಾವಳಿ ಸಂಭ್ರಮ’ ಕಾರ್ಯಕ್ರಮವು ನವೆಂಬರ್ 11ರಂದು ಕನೀರುತೋಟದ ಸಮನ್ವಿ ಫಾರ್ಮ್ಹೌಸ್ನಲ್ಲಿ ಸಡಗರ ಹಾಗೂ ಸಂಭ್ರಮದಿಂದ ನಡೆಯಿತು.

ಕೊಲ್ಯ: ಯುವವಾಹಿನಿ (ರಿ.) ಕೊಲ್ಯ ಘಟಕದ ವತಿಯಿಂದ ಸದಸ್ಯರಿಗಾಗಿ ಆಯೋಜಿಸಲಾಗಿದ್ದ ‘ದೀಪಾವಳಿ ಸಂಭ್ರಮ’ ಕಾರ್ಯಕ್ರಮವು ನವೆಂಬರ್ 11ರಂದು ಕನೀರುತೋಟದ ಸಮನ್ವಿ ಫಾರ್ಮ್ಹೌಸ್ನಲ್ಲಿ ಸಡಗರ ಹಾಗೂ ಸಂಭ್ರಮದಿಂದ ನಡೆಯಿತು.
ಬೆಳಕಿನ ಹಬ್ಬ ದೀಪಾವಳಿಯ ಅಂಗವಾಗಿ ಘಟಕದ ಸದಸ್ಯರೆಲ್ಲರೂ ಒಗ್ಗೂಡಿ ಹಣತೆಗಳನ್ನು ಬೆಳಗಿಸಿ, ಪಟಾಕಿ ಸಿಡಿಸಿ, ಸಿಹಿ ತಿಂಡಿಗಳನ್ನು ಸವಿಯುತ್ತಾ ಪರಸ್ಪರ ದೀಪಾವಳಿ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷ ಜೀವನ್ ಕೊಲ್ಯ ಅವರು ಎಲ್ಲರನ್ನು ಸ್ವಾಗತಿಸಿ, ದೀಪಾವಳಿ ಹಬ್ಬದ ಮಹತ್ವ ಹಾಗೂ ಯುವವಾಹಿನಿ ಕುಟುಂಬದ ಸದಸ್ಯರೆಲ್ಲರೂ ಒಗ್ಗಟ್ಟಿನಿಂದ ಹಬ್ಬ ಆಚರಿಸುವ ಉದ್ದೇಶವನ್ನು ವಿವರಿಸಿದರು. "ಎಲ್ಲಾ ಸದಸ್ಯರು ಒಂದೇ ಮನೆಯ ಕುಟುಂಬದವರಿದ್ದಂತೆ. ಎಲ್ಲರೂ ಜೊತೆಯಾಗಿ ಸೇರಿ ಹಬ್ಬ ಆಚರಿಸುವುದರಿಂದ ಸಂಭ್ರಮ ಹೆಚ್ಚುವುದರ ಜೊತೆಗೆ ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಬಾಂಧವ್ಯ ಗಟ್ಟಿಯಾಗುತ್ತದೆ" ಎಂದು ತಿಳಿಸಿದರು.
ಘಟಕದ ಪ್ರಚಾರ ನಿರ್ದೇಶಕ ನಂದನ್ ಕುಂಪಲ ಅವರು ಸದಸ್ಯರಿಗಾಗಿ ವಿವಿಧ ಮನರಂಜನಾ ಆಟಗಳನ್ನು ಆಯೋಜಿಸಿದರು. ಸದಸ್ಯರು ಹಾಡು, ನೃತ್ಯ ಹಾಗೂ ವಿವಿಧ ಮನರಂಜನಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದರು.

ಈ ಸಂದರ್ಭದಲ್ಲಿ ಘಟಕದ ಕಾರ್ಯದರ್ಶಿ ಮುಕೇಶ್ ಕಿನ್ಯ, ಪ್ರಥಮ ಉಪಾಧ್ಯಕ್ಷ ಜೀವನ್ ಬೆರಿಕೆ, ದ್ವಿತೀಯ ಉಪಾಧ್ಯಕ್ಷ ಲತೀಶ್ ಪಾಪುದಡಿ, ಕೋಶಾಧಿಕಾರಿ ಅನಿತಾ ಸುಂದರ್, ಕೇಂದ್ರ ಸಮಿತಿ ಮಹಿಳಾ ಸಂಘಟನಾ ನಿರ್ದೇಶಕಿ ಸುಧಾ ಸುರೇಶ್, ಕೇಂದ್ರ ಸಮಿತಿ ಆಂತರಿಕ ಲೆಕ್ಕಪತ್ರ ಪರಿಶೋಧನಾ ನಿರ್ದೇಶಕ ಸುಂದರ್ ಸುವರ್ಣ, ಕೇಂದ್ರ ಸಮಿತಿ ಯುವ ಸಿಂಚನ ಸಂಪಾದಕ ಮಂಡಳಿ ಸದಸ್ಯ ಲತೀಶ್ ಸಂಕೋಳಿಗೆ, ಸ್ಥಾಪಕ ಅಧ್ಯಕ್ಷ ಸುರೇಶ್ ಬಿಲ್ಲವ, ಮಾಜಿ ಅಧ್ಯಕ್ಷರಾದ ಕುಸುಮಾಕರ್ ಕುಂಪಲ, ಆನಂದ್ ಮಲಯಾಳಕೋಡಿ, ಮೋಹನ್ ಮಾಡೂರು ಸೇರಿದಂತೆ ಘಟಕದ ಪದಾಧಿಕಾರಿಗಳು ಹಾಗೂ ಹೆಚ್ಚಿನ ಸಂಖ್ಯೆಯ ಸದಸ್ಯರು ಉಪಸ್ಥಿತರಿದ್ದರು.

ಎಲ್ಲರೂ ಒಂದೆಡೆ ಸೇರಿ ಪ್ರೀತಿ, ವಿಶ್ವಾಸ ಮತ್ತು ಸಂತೋಷವನ್ನು ಹಂಚಿಕೊಳ್ಳುವ ಮೂಲಕ ದೀಪಾವಳಿ ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸುವಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಯಿತು.
