ಯುವವಾಹಿನಿ ಕ್ರೀಡೋತ್ಸವ–2026: ಯುವಶಕ್ತಿ ದೇಶದ ದೊಡ್ಡ ಮಾನವ ಸಂಪತ್ತು: ಡಾ. ಮೋಹನ್ ಆಳ್ವ
ಮೂಡುಬಿದಿರೆ, ಅ. 4: ಯುವಜನತೆಯೇ ದೇಶದ ನಿಜವಾದ ಸಂಪತ್ತು. ಯುವಶಕ್ತಿಯನ್ನು ಸರಿಯಾದ ದಿಕ್ಕಿನಲ್ಲಿ ಬೆಳೆಸಿದರೆ ದೇಶದ ಭವಿಷ್ಯ ಮತ್ತಷ್ಟು ಬಲಿಷ್ಠಗೊಳ್ಳಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು.

ಮೂಡುಬಿದಿರೆ, ಅ. 4: ಯುವಜನತೆಯೇ ದೇಶದ ನಿಜವಾದ ಸಂಪತ್ತು. ಯುವಶಕ್ತಿಯನ್ನು ಸರಿಯಾದ ದಿಕ್ಕಿನಲ್ಲಿ ಬೆಳೆಸಿದರೆ ದೇಶದ ಭವಿಷ್ಯ ಮತ್ತಷ್ಟು ಬಲಿಷ್ಠಗೊಳ್ಳಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು.
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆದ ‘ಯುವವಾಹಿನಿ ಕ್ರೀಡೋತ್ಸವ–2026’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕ್ರೀಡೆಯ ಪ್ರಮುಖ ಸಂದೇಶವೇ ಕ್ರೀಡಾ ಸ್ಫೂರ್ತಿ. ಗೆಲುವು ಮತ್ತು ಸೋಲು ಕ್ರೀಡೆಯಲ್ಲಿ ಸಹಜ. ಗೆದ್ದಾಗ ಅಹಂಕಾರಪಡದೆ, ಸೋತಾಗ ಕುಗ್ಗದೆ, ಎದುರಾಳಿಯನ್ನು ಗೌರವಿಸಿ ಮತ್ತೆ ಪ್ರಯತ್ನಿಸುವ ಮನೋಭಾವವೇ ನಿಜವಾದ ಕ್ರೀಡಾ ಸ್ಫೂರ್ತಿ. ಈ ಮನೋಭಾವವನ್ನು ಜೀವನದಲ್ಲಿಯೂ ಅಳವಡಿಸಿಕೊಂಡು ಗೆಲುವು–ಸೋಲನ್ನು ಸಮಾನವಾಗಿ ಸ್ವೀಕರಿಸಿ ಮುನ್ನಡೆಯಬೇಕು ಎಂದರು.
ಬಂಟರು, ಬಿಲ್ಲವರು ಹಾಗೂ ಮೊಗವೀರರು ಒಂದೇ ತಾಯಿಯ ಮಕ್ಕಳೆಂಬ ಪ್ರತೀತಿ ಇದೆ. ಈ ಬಾಂಧವ್ಯವನ್ನು ಉಳಿಸಿಕೊಂಡು ಪರಸ್ಪರ ಗೌರವ, ಪ್ರೀತಿ ಹಾಗೂ ಸೌಹಾರ್ದದಿಂದ ಬದುಕಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು, ಮೂಡುಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಸ್ವಾಗತಿಸಿದರು, ಕ್ರೀಡಾ ನಿರ್ದೇಶಕ ಶಂಕರ್ ಕೋಟ್ಯಾನ್ ವಂದಿಸಿದರು.

ಪಥಸಂಚಲನದಲ್ಲಿ ಧ್ವಜವಂದನೆ ಸ್ವೀಕರಿಸಿದ ಕಾರವಾರ ನೌಕಾನೆಲೆಯ ಐಎನ್‌ಎಸ್ ವಿಕ್ರಮಾದಿತ್ಯದ ಮುಖ್ಯ ವೈದ್ಯಾಧಿಕಾರಿ ಸರ್ಜನ್ ಕಮಾಂಡರ್ ಡಾ. ಅರ್ಜುನ್ ಅಂಚನ್ ಹಾಗೂ ಮಹಿಳಾ ವಿಶ್ವಕಪ್ ಕಬಡ್ಡಿ ವಿಜೇತ ತಂಡದ ಸದಸ್ಯೆ ಧನಲಕ್ಷ್ಮಿ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.


ಕಾರ್ಯಕ್ರಮದಲ್ಲಿ ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರಾದ ಪ್ರಮಲ್ ಕುಮಾರ್, ಮೂಡುಬಿದಿರೆ ಬಿಲ್ಲವ ಸಂಘದ ಅದ್ಯಕ್ಷರಾದ ನವೀನ್‌ಚಂದ್ರ ಕರ್ಕೇರ, ಉದ್ಯಮಿ ನಾರಾಯಣ ಪಿ.ಎಂ., ಕೆ. ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಡಾ. ಅಮರಶ್ರೀ, ಮುಖ್ಯ ಅತಿಥಿಯಾಗಿ ಭಾಗವಹಿಸಿದರು
ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್, ಕ್ರೀಡಾ ನಿರ್ದೇಶಕರಾದ ಶಂಕರ್ ಎ ಕೋಟ್ಯಾನ್, ಯುವವಾಹಿನಿ ಮೂಡುಬಿದಿರೆ ಘಟಕದ ಕ್ರೀಡಾ ನಿರ್ದೇಶಕರಾದ ಪ್ರಸಾದ್ ಸುವರ್ಣ ವೇದಿಕೆಯಲ್ಲಿ ಪ್ರಮುಖರು ಉಪಸ್ಥಿತರಿದ್ದರು.
ಕ್ರೀಡೋತ್ಸವದಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಯುವಕರು ಉತ್ಸಾಹದಿಂದ ಪಾಲ್ಗೊಂಡರು. ದಿನೇಶ್ ಸುವರ್ಣ ರಾಯಿ ಹಾಗೂ ರಕ್ಷಾ ರೆಂಜಾಳ ಕಾರ್ಯಕ್ರಮ ನಿರೂಪಿಸಿದರು.
