ಯುವವಾಹಿನಿ (ರಿ.) ಮಂಗಳೂರು ಘಟಕದಲ್ಲಿ ಬೈಲಾ ತಿದ್ದುಪಡಿ ವಿಶೇಷ ಮಹಾಸಭೆ
ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆದೇಶದಂತೆ, ಬೈಲಾ ಉಪನಿಯಮಗಳ ತಿದ್ದುಪಡಿ, ಸೇರ್ಪಡೆ ಹಾಗೂ ಅನುಮೋದನೆಗೆ ಸಂಬಂಧಿಸಿದ ವಿಶೇಷ ಮಹಾಸಭೆಯು ಯುವವಾಹಿನಿ (ರಿ.) ಮಂಗಳೂರು...

ಮಂಗಳೂರು, ಆ. 5: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆದೇಶದಂತೆ, ಬೈಲಾ ಉಪನಿಯಮಗಳ ತಿದ್ದುಪಡಿ, ಸೇರ್ಪಡೆ ಹಾಗೂ ಅನುಮೋದನೆಗೆ ಸಂಬಂಧಿಸಿದ ವಿಶೇಷ ಮಹಾಸಭೆಯು ಯುವವಾಹಿನಿ (ರಿ.) ಮಂಗಳೂರು ಘಟಕದಲ್ಲಿ ಆ. 4ರಂದು ಉರ್ವಸ್ಟೋರ್‌ನ ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು.
ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರಾರ್ಥನೆಯೊಂದಿಗೆ ಸಭೆ ಆರಂಭಗೊಂಡಿತು. ಘಟಕದ ಅಧ್ಯಕ್ಷ ಹರೀಶ್ ಕೆ. ಸುವರ್ಣ ಅವರು ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ಕೇಂದ್ರ ಸಮಿತಿ ಹಾಗೂ ಮಂಗಳೂರು ಘಟಕದ ಮಾಜಿ ಅಧ್ಯಕ್ಷ ಅಶೋಕ್ ಕುಮಾರ್ ಅವರು ಬೈಲಾ ಉಪನಿಯಮಗಳ ತಿದ್ದುಪಡಿ ಮತ್ತು ಸೇರ್ಪಡೆಗೆ ಸಂಬಂಧಿಸಿದ ಅಂಶಗಳನ್ನು ಸಭೆಗೆ ಹಂತ ಹಂತವಾಗಿ ವಿವರಿಸಿ, ಸದಸ್ಯರ ಅನುಮೋದನೆ ಪಡೆದರು. ಮಾಜಿ ಅಧ್ಯಕ್ಷ ಪರಮೇಶ್ವರ ಪೂಜಾರಿ ಅವರು ಕೆಲವು ಅಂಶಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ಬಳಿಕ ನಡೆದ ಚರ್ಚೆಯಲ್ಲಿ ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ತಮ್ಮ ಸಲಹೆ-ಸೂಚನೆಗಳನ್ನು ನೀಡಿದ್ದು, ಚರ್ಚೆಯ ನಂತರ ತಿದ್ದುಪಡಿಗಳಿಗೆ ಸಭೆಯು ಅನುಮೋದನೆ ನೀಡಿತು.

ಸಭೆಯಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಭಾಗವಹಿಸಿ ವಿಶೇಷ ಮಹಾಸಭೆಯನ್ನು ಯಶಸ್ವಿಗೊಳಿಸಿದರು.
ಆರಂಭದಲ್ಲಿ ಉದ್ಯೋಗ ಹಾಗೂ ಭವಿಷ್ಯ ನಿರ್ಮಾಣ ನಿರ್ದೇಶಕಿ ಶ್ರೀಮತಿ ಸವಿತಾ ಕೋಟ್ಯಾನ್ ಅವರು ಗುರು ಸಂದೇಶವನ್ನು ವಾಚಿಸಿದರು. ಅಂತಿಮವಾಗಿ ಘಟಕದ ಕಾರ್ಯದರ್ಶಿ ಉಷಾ ಕೆ. ಅವರು ವಂದನಾರ್ಪಣೆ ಸಲ್ಲಿಸಿದರು.
