Skip to content
Billava News

ಯುವವಾಹಿನಿಯ ಸಮಾಜ ಹಾಗೂ ಶೈಕ್ಷಣಿಕ ಸೇವೆ ಶ್ಲಾಘನೀಯ: ಬ್ರಿಟನ್ ಬಿಲ್ಲವ ಬಳಗದ ಮುಖ್ಯಸ್ಥ ಹಾಗೂ ಅನಿವಾಸಿ ಭಾರತೀಯ ವೈದ್ಯರಾದ ಡಾ. ಪಿ.ಕೆ. ಮನೋಜ್ ಪೂಜಾರಿ

ಪಡುಬಿದ್ರಿ, ಆಗಸ್ಟ್ 30: ಪಡುಬಿದ್ರಿಯ ಸಹಕಾರ ಸಂಗಮ ಸಿ.ಎ. ಸೊಸೈಟಿ ಸಭಾಂಗಣದಲ್ಲಿ ಭಾನುವಾರ ನಡೆದ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ನಡೆಯಿತು...

By Billavavani
ಯುವವಾಹಿನಿಯ ಸಮಾಜ ಹಾಗೂ ಶೈಕ್ಷಣಿಕ ಸೇವೆ ಶ್ಲಾಘನೀಯ:  ಬ್ರಿಟನ್ ಬಿಲ್ಲವ ಬಳಗದ ಮುಖ್ಯಸ್ಥ ಹಾಗೂ ಅನಿವಾಸಿ ಭಾರತೀಯ ವೈದ್ಯರಾದ ಡಾ. ಪಿ.ಕೆ. ಮನೋಜ್ ಪೂಜಾರಿ

ಪಡುಬಿದ್ರಿ, ಆಗಸ್ಟ್ 30: ಪಡುಬಿದ್ರಿಯ ಸಹಕಾರ ಸಂಗಮ ಸಿ.ಎ. ಸೊಸೈಟಿ ಸಭಾಂಗಣದಲ್ಲಿ ಭಾನುವಾರ ನಡೆದ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ನಡೆಯಿತು ಹಾಗೂ ಪಿ.ಕೆ. ಜಯರಾಮ್ ಪ್ರವರ್ತಿತ ವಿದ್ಯಾನಿಧಿ ವಿತರಣೆ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.

ಯುವಜನತೆ ಸಮಾಜದ ಶಕ್ತಿಯಾಗಿದ್ದು, ಸಮಾಜದ ಶ್ರೇಯೋಭಿವೃದ್ಧಿ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಯುವವಾಹಿನಿ ಸಂಸ್ಥೆ ಸಲ್ಲಿಸುತ್ತಿರುವ ನಿರಂತರ ಸೇವೆ ಶ್ಲಾಘನೀಯ “ಯುವಶಕ್ತಿ ಸದಾ ರಚನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ಶೈಕ್ಷಣಿಕ ಕ್ಷೇತ್ರಕ್ಕೆ ಯುವವಾಹಿನಿ ನೀಡುತ್ತಿರುವ ಪ್ರೋತ್ಸಾಹ ಮತ್ತು ಸಹಕಾರ ಮಾದರಿಯಾಗಿದೆ” ಎಂದು ಬ್ರಿಟನ್ ಬಿಲ್ಲವ ಬಳಗದ ಮುಖ್ಯಸ್ಥ ಹಾಗೂ ಅನಿವಾಸಿ ಭಾರತೀಯ ವೈದ್ಯರಾದ ಡಾ. ಪಿ.ಕೆ. ಮನೋಜ್ ಪೂಜಾರಿ ಹೇಳಿದರು.

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಶ್ರೀ ಅಶೋಕ್ ಕುಮಾರ್ ಪಡ್ಪು ಅವರು ನೂತನ ಅಧ್ಯಕ್ಷ ಶ್ರೀ ನಿಖಿಲ್ ಪೂಜಾರಿ ಹಾಗೂ ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಬಳಿಕ ನಿರ್ಗಮಿತ ಅಧ್ಯಕ್ಷ ಶ್ರೀ ವಿಧಿತ್ ಕುಮಾರ್ ಕರ್ನಿರೆ ಅವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು. ತಮ್ಮ ಅಧ್ಯಕ್ಷಾವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ ಅವರು, ನೂತನ ತಂಡದ ಮುಂದಿನ ಕಾರ್ಯಯೋಜನೆಗಳಿಗೆ ಶುಭ ಹಾರೈಸಿದರು.

ಸಮಾಜ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಗಣನೀಯ ಕೊಡುಗೆಯನ್ನು ಪರಿಗಣಿಸಿ ಡಾ. ಪಿ.ಕೆ. ಮನೋಜ್ ಪೂಜಾರಿ ಹಾಗೂ ಡಾ. ಬೃಂದಾ ಮನೋಜ್ ದಂಪತಿಗಳನ್ನು ಸನ್ಮಾನಿಸಲಾಯಿತು.

111.jpeg

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಯುವ ಉದ್ಯಮಿ ಶ್ರೀ ಗಣೇಶ್ ಗುಜರನ್, ಮಂಗಳೂರಿನ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯದ ಮನೋವೈದ್ಯಕೀಯ ವಿಭಾಗದ ಪ್ರಾಧ್ಯಾಪಕ ಡಾ. ಪಿ.ಕೆ. ಕಿರಣ್ ಕುಮಾರ್, ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಶ್ರೀ ವೈ. ಸುಧೀರ್ ಕುಮಾರ್ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಶ್ರೀಮತಿ ಮಮತಾ ರಾಜ್ ಉಪಸ್ಥಿತರಿದ್ದರು.