Skip to content
Billava News

ಉಪ್ಪಿನಂಗಡಿ ಸರ್ಕಲ್‌ಗೆ ಸ್ವಾತಂತ್ರ್ಯ ಹೋರಾಟಗಾರ ಮಂಜ ಬೈದ್ಯರ ಹೆಸರು ನಾಮಕರಣಕ್ಕೆ ಯುವವಾಹಿನಿ (ರಿ.) ಉಪ್ಪಿನಂಗಡಿ ಮನವಿ

ಉಪ್ಪಿನಂಗಡಿ: ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಅಶೋಕ್ ಕುಮಾರ್ ರೈ ಅವರನ್ನು ಭೇಟಿ ಮಾಡಿ...

By Billavavani
ಉಪ್ಪಿನಂಗಡಿ ಸರ್ಕಲ್‌ಗೆ ಸ್ವಾತಂತ್ರ್ಯ ಹೋರಾಟಗಾರ ಮಂಜ ಬೈದ್ಯರ ಹೆಸರು ನಾಮಕರಣಕ್ಕೆ ಯುವವಾಹಿನಿ (ರಿ.) ಉಪ್ಪಿನಂಗಡಿ ಮನವಿ

ಉಪ್ಪಿನಂಗಡಿ: ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಅಶೋಕ್ ಕುಮಾರ್ ರೈ ಅವರನ್ನು ಭೇಟಿ ಮಾಡಿ, ಉಪ್ಪಿನಂಗಡಿ ಸರ್ಕಲ್‌ಗೆ ಸ್ವಾತಂತ್ರ್ಯ ಹೋರಾಟಗಾರ ಮಂಜ ಬೈದ್ಯರ ಹೆಸರನ್ನು ನಾಮಕರಣ ಮಾಡುವಂತೆ ಹಾಗೂ ಅವರ ಪ್ರತಿಮೆಯನ್ನು ನಿರ್ಮಿಸಿ ಮುಂದಿನ ಪೀಳಿಗೆಗೆ ಅವರ ಸೇವೆ ಮತ್ತು ತ್ಯಾಗವನ್ನು ಶಾಶ್ವತವಾಗಿ ಉಳಿಸುವಂತೆ ಮನವಿ ಸಲ್ಲಿಸಲಾಯಿತು.

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರು, ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ಅಧ್ಯಕ್ಷರಾದ ಮನೋಜ್ ಎನ್ ಸಾಲ್ಯಾನ್, ಗೌರವ ಸಲಹೆಗಾರ ವರದರಾಜ್ ಎಂ., ಯುವವಾಹಿನಿ ಕೇಂದ್ರ ಸಮಿತಿ ಹಾಗೂ ಉಪ್ಪಿನಂಗಡಿ ಘಟಕದ ಮಾಜಿ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ. ಬಿ, ಮಾಜಿ ಅಧ್ಯಕ್ಷರಾದ ಚಂದ್ರಶೇಖರ್ ಸನಿಲ್, ಕಾರ್ಯದರ್ಶಿ ರಮೇಶ್ ಎಸ್ ಸಾಂತ್ಯ, ಉಪಾಧ್ಯಕ್ಷರಾದ ಅಂಕಿತ್ ಎಂ. ಜೆ., ವಿಕ್ರಮ್ ಬಿಳಿಯೂರು, ರಕ್ಷಿತ್ ಸುಣ್ಣಾನ, ಶೇಖರ್ ಪೂಜಾರಿ ಹಾಗೂ ಘಟಕದ ಇತರ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.